ಲಾರಿ ಢಿಕ್ಕಿ ಹೊಡೆದು ಪಾದಚಾರಿ ತಾಯಿ-ಮಗಳು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಲಾರಿ ಹರಿದು ಇಬ್ಬರು ಪಾದಚಾರಿ ಮಹಿಳೆಯರು ಮೃತಪಟ್ಟ ಘಟನೆ ಬೆಂಗಳೂರಿನ ಬಾಣಸವಾಡಿ ಬಳಿಯ ಬಾಬುಸಾಬ್‍ಪಾಳ್ಯದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಮೃತರು ದೀಪಾವಳಿ ಹಬ್ಬ ಮುಗಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ವಾಪಾಸ್ಸಾಗಿ 6.30ರ ಸುಮಾರಿಗೆ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ತಮಿಳುನಾಡು ಮೂಲದ ತಾಯಿ-ಮಗಳು ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಬಾಣಸವಾಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

Scroll to Top