? ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಉರುಳಿ ಬಿದ್ದ ಟಿಪ್ಪರ್ ➤ ಇಬ್ಬರು ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಆನೇಕಲ್, ಮಾ. 22. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ಪಕ್ಕದಲ್ಲೇ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಇಂದು ಬೆಳಗ್ಗೆ ನಡೆದಿದೆ.







ಸಣ್ಣ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ಚಲಿಸುತ್ತಿದ್ದ ತಮಿಳುನಾಡು ನೋಂದಣಿಯ ಕಾರಿನ ಮೇಲೆ ಉರುಳಿಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರೊಳಗಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ, ಹೆದ್ದಾರಿಯಲ್ಲಿ ಬಿದ್ದಿರುವ ಟಿಪ್ಪರ್ ಹಾಗೂ ಕಾರನ್ನು ತೆರವುಗೊಳಿಸಿದ್ದಾರೆ. ಮೃತರ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.






error: Content is protected !!
Scroll to Top