ದಂಡ ಹಾಕಲು ತೆರಳಿದ ಪೊಲೀಸರ ತಲೆದಂಡ | ಹಿಗ್ಗಾಮುಗ್ಗ ಥಳಿಸಿದ ಸಾರ್ವಜನಿಕರು ➤ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮೈಸೂರು, ಮಾ.22. ಪೊಲೀಸರು ನಿಲ್ಲಿಸಲು ಸೂಚಿಸಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಬೈಕ್‌ ಸವಾರನಿಗೆ ಸಂಚಾರ ಪೊಲೀಸರು ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್‌ ಸವಾರ ಕೆಳಗೆ ಬಿದ್ದಿದ್ದು, ಈ ವಲೆ ಹಿಂಬದಿಯಿಂದ ಬಂದ ಲಾರಿಯು ಸವಾರನ ಹರಿದು ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ನಗರದ ಹಿನಕಲ್‌ ರಿಂಗ್‌ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ಬೈಕನ್ನು ನಿಲ್ಲಿಸಲು ಸೂಚಿಸಿದರೂ ಬೈಕ್ ಸವಾರ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ತಕ್ಷಣವೇ ಲಾಠಿಯಿಂದ ಪೊಲೀಸರು ಸವಾರನಿಗೆ ಹೊಡೆದಿದ್ದು, ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಹ ಸವಾರ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

Also Read  ಉಪ್ಪಿನಂಗಡಿ: ಕುದುರೆಗೆ ಬಸ್ ಢಿಕ್ಕಿ ➤ ಕುದುರೆ ಹಾಗೂ ಸವಾರ ಗಂಭೀರ

ಸುದ್ದಿ ತಿಳಿದು ಆಕ್ರೋಶಗೊಂಡ ಸಾರ್ವಜನಿಕರು ಪೊಲೀಸರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸ್ ವಾಹನವನ್ನು ಹಾನಿಗೊಳಿಸಿ ಪಲ್ಟಿ ಮಾಡಿದ್ದಾರೆ. ಇದೀಗ ವೀಡಿಯೋ ವೈರಲ್ ಆಗುತ್ತಿದೆ.

 

 

error: Content is protected !!
Scroll to Top