ಶಿಕ್ಷಣ ತಜ್ಞ ಪ್ರೊ.ಎಂ.ಅಬೂಬಕರ್ ತುಂಬೆ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 23. ಶಿಕ್ಷಣ ತಜ್ಞ, ಯುಎಇ ರಾಸ್ ಅಲ್ ಖೈಮಾದ ಸ್ಕಾಲರ್ಸ್ ಇಂಡಿಯನ್ ಹೈಸ್ಕೂಲ್ ಪ್ರಾಂಶುಪಾಲ ಪ್ರೊ.ಎಂ.ಅಬೂಬಕರ್ ತುಂಬೆ(59) ಅವರು ಮಂಗಳವಾರ ಮುಂಜಾನೆ ಯುಎಇಯ ರಾಸ್ ಅಲ್ ಖೈಮಾದಲ್ಲಿರುವ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

 

 

1962ರ ಆಗಸ್ಟ್ 15ರಂದು ಜನಿಸಿದ ಇವರು 1982ರಲ್ಲಿ ಮಂಗಳೂರಿನ ಬದ್ರಿಯಾ ಪ್ರಾಥಮಿಕ‌ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ‌ ಆರಂಭಿಸಿದ್ದರು. 1987ರವರೆಗೆ ಅಲ್ಲಿ ಶಿಕ್ಷಕರಾಗಿದ್ದ ಇವರು ಕೆಲಕಾಲ ಬಿ.ಎ.ಗ್ರೂಪ್ ತುಂಬೆ ಇದರ ಎಕ್ಸಿಕ್ಯೂಟಿವ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು. 1988ರಿಂದ 1995ರ ವರೆಗೆ ತುಂಬೆ ಬಿ.ಎ. ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. 1996ರಲ್ಲಿ ಕೋಟೆಕಾರ್ ಮುಸ್ಲಿಮ್ ವಸತಿ ಶಾಲೆಯ ಪ್ರಾಂಶುಪಾಲರಾಗಿದ್ದ ಇವರು 1997ರಿಂದ ಯುಎಇ ನಿಮ್ಸ್ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿ ‌ಕಾರ್ಯ ನಿರ್ವಹಿಸಿದ್ದರು‌. ಬಳಿಕ ಯುಎಇ ರಾಸ್ ಅಲ್ ಖೈಮಾ ಸ್ಕಾಲರ್ಸ್ ಇಂಡಿಯನ್ ಸ್ಕೂಲ್‌ನ ಪ್ರಾಂಶುಪಾಲರಾಗಿದ್ದ ಅವರು ಪ್ರಸಕ್ತ ಅಲ್ಲಿಯೇ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗ, ಶಿಷ್ಯರನ್ನು ಅಗಲಿದ್ದಾರೆ.

error: Content is protected !!
Scroll to Top