ಕೊರೋನಾ ಎರಡನೇ ಅಲೆ ಹಿನ್ನೆಲೆ ➤ ಮುಂಜಾಗ್ರತಾ ಕ್ರಮ ಪಾಲಿಸದವರ ವಿರುದ್ಧ ಕಾನೂನು ಕ್ರಮ- ಕಡಬ ತಹಶೀಲ್ದಾರ್ ಅನಂತ್ ಶಂಕರ್

(ನ್ಯೂಸ್ ಕಡಬ) newskadaba.com ಕಡಬ, ಮಾ. 24.‌ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕಾದುದು ಎಲ್ಲರ ಕರ್ತವ್ಯವಾಗಿದೆ. ಮುಂಜಾಗೃತಾ ಕ್ರಮ ಪಾಲಿಸದ ಮತ್ತು ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಡಬ ತಾಲೂಕು ಆಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಡಬ ಪೇಟೆಯಲ್ಲಿ ಆಯೋಜಿಸಿದ್ದ ಕೊರೋನಾ ಜನಜಾಗೃತಿ ಜಾಥಾದಲ್ಲಿ ಕಡಬ ತಹಶೀಲ್ದಾರ್ ಅನಂತ ಶಂಕರ್ ಎಚ್ಚರಿಕೆ ನೀಡಿದ್ದಾರೆ.

 

ಬಳಿಕ ತಾ.ಪಂ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಮಾತನಾಡಿ, ಮುಂಜಾಗೃತಾ ಕ್ರಮಗಳನ್ನು ಪಾಲಿಸುವ ಮೂಲಕ ಇಲಾಖೆಯ ಜೊತೆ ಕೊರೋನಾ ಸೋಂಕು ತಡೆಗಟ್ಟಲು ಕೈಜೋಡಿಸೋಣ ಎಂದರು. ಜಿ.ಪಂ ಸದಸ್ಯ ಪಿ.ಪಿ ವರ್ಗೀಸ್ ಮಾತನಾಡಿ ಸೋಂಕು ಉಲ್ಬಣಿಸದಂತೆ ಜಾಗರೂಕತೆ ವಹಿಸುವುದು ನಮ್ಮ ಅಗತ್ಯ ಎಂದರು. ಈ ಸಂದರ್ಭದಲ್ಲಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್, ಪ.ಪಂ ಮುಖ್ಯಾಧಿಕಾರಿ ಅರುಣ್, ಕಡಬ ಆರಕ್ಷಕ ಠಾಣಾ ಎಸ್.ಐ ರುಕ್ಮ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Also Read  ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ನೀರುಪಾಲು- ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆ

error: Content is protected !!
Scroll to Top