? ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಮಾ. 24. ವರದಕ್ಷಿಣೆ ಕಿರುಕುಳವನ್ನು ಸಹಿಸಲಾರದೇ ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.

 

ಆತ್ಮಹತ್ಯೆಗೈದವರನ್ನು ನಳಿನಿ (36) ಎಂದು ಗುರುತಿಸಲಾಗಿದೆ. ಮೂಲತಃ ಶಿಡ್ಲಘಟ್ಟದವರಾದ ಇವರನ್ನು 16 ವರ್ಷಗಳ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬವರಿಗೆ ವಿವಾಹ ಮಾಡಲಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿವಾಹವಾಗಿ ಕೆಲ ವರ್ಷಗಳ ಬಳಿಕ ಆಕೆಯ ಪತಿ ವರದಕ್ಷಿಣೆ ತರುವಂತೆ ನಳಿನಿಗೆ ಹೊಡೆದು ತವರು ಮನೆಗೆ ಕಳುಹಿಸುತ್ತಿದ್ದಲ್ಲದೇ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಇದೀಗ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ತಮ್ಮ ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಆಕೆಯ ತಾಯಿ ಮತ್ತು ಸಂಬಂಧಿಕರು ಒತ್ತಾಯಿಸಿದ್ದಾರೆ.

Also Read  ಡಾ. ಚೂಂತಾರು ರವರು ರಾಷ್ಟ್ರಪತಿ ಸೇವಾ ಪದಕಕ್ಕೆ ಆಯ್ಕೆ- ಸ್ವೀಕಾರ

error: Content is protected !!
Scroll to Top