(ನ್ಯೂಸ್ ಕಡಬ) newskadaba.com ಮ0ಗಳೂರು ಜೂ.08. ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಬಾಲಕರ ವಿದ್ಯಾರ್ಥಿನಿಲಯ ಪಡೀಲ್, ಬಾಲಕಿಯರ ವಿದ್ಯಾರ್ಥಿ ನಿಲಯ ಚಿಲಿಂಬಿ, ಬೆಂಜನಪದವು, ಕಡಬ ಮತ್ತು ಸ್ನಾತಕೋತರ ವಿದ್ಯಾರ್ಥಿ ನಿಲಯ ದೇರಳಕಟ್ಟೆ ಮತ್ತು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಗುರುಕಂಬಳದಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಅಥವಾ ಆಯಾಯ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರಗಳಲ್ಲಿ ಪಡೆಯಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ
