ಹೃದಯಾಘಾತದಿಂದ ಮೃತಪಟ್ಟಿದ್ದ ಪತ್ರಕರ್ತ ಕಲ್ಲುಗುಡ್ಡೆ ಖಾದರ್ ಸಾಹೇಬ್ ➤ ಸಾಹೇಬ್ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಕಡಬ, ಮಾ.24. ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಇತ್ತೀಚೆಗೆ ಮೃತಪಟ್ಟಿದ್ದ ಸುದ್ದಿ ಬಿಡುಗಡೆ ದಿನಪತ್ರಿಕೆಯ ಕಡಬ ಪ್ರತಿನಿಧಿ‌ ಖಾದರ್ ಸಾಹೇಬ್ ಕಲ್ಲುಗುಡ್ಡೆಯವರ ಕುಟುಂಬಕ್ಕೆ ರಾಜ್ಯ ಸರಕಾರವು 5 ಲಕ್ಷ ರೂ. ಪರಿಹಾರ ಘೋಷಿಸಿದೆ.

ಖಾದರ್ ಸಾಹೇಬ್ ಅವರ ಅಕಾಲಿನ ನಿಧನವು ಅವರ ಕುಟುಂಬಕ್ಕೆ ಅಘಾತವನ್ನು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಭಕ್ಕೆ ಪರಿಹಾರ ನೀಡಬೇಕು ಎಂದು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪತ್ರಕರ್ತರ ಸಂಘವು, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮುಖಾಂತರ ಸರಕಾರಕ್ಕೆ ಮನವಿ ಮಾಡಿ ಪರಿಹಾರ ನೀಡುವಂತೆ ಒತ್ತಾಯಿಸಿತ್ತು. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪರವರು ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಮಂಜೂರು ಮಾಡಿದ್ದಾರೆ.

Also Read  ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಮದ್ರಾಸ್ ನಡೆಸಿರುವ ಹಿಂದಿ ಪರೀಕ್ಷೆಯಲ್ಲಿ ಶಕ್ತಿರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿತೇರ್ಗಡೆ

 

 

 

error: Content is protected !!
Scroll to Top