ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಸಜೀವ ದಹನಗೊಂಡ ಲಾರಿ ಚಾಲಕನ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಸಜೀವ ದಹನಗೊಂಡಿದ್ದ ಲಾರಿ ಚಾಲಕನ ವಿವರ ಪತ್ತೆಯಾಗಿದೆ.

ಮೃತ ಕಂಟೇನರ್ ಚಾಲಕನನ್ನು ಮೈಸೂರು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಬುಧವಾರ ತಡರಾತ್ರಿ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಲಾರಿಗೆ ಬೆಂಕಿ ಹಿಡಿದಿದ್ದು, ಲಾರಿ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದರು‌. ಬಸ್ಸು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಹೊರಬಂದಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದರು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ದೇವಸ್ಥಾನದಲ್ಲೇ ಮೂವರ ಹತ್ಯೆ ➤ ಹುಂಡಿ ದೋಚಿ ಪರಾರಿಯಾದ ದುಷ್ಕರ್ಮಿಗಳು

 

 

error: Content is protected !!
Scroll to Top