ಖ್ಯಾತ ಚಿತ್ರನಟಿ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿ ➤ ಸೇರಿದಂತೆ ಹಲವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಗಾಹುತಿಯಾದ ಬಸ್ ನಲ್ಲಿ ತುಳುನಾಡಿನ ಖ್ಯತ ನಟಿಯೊಬ್ಬರಿದ್ದರು ಎನ್ನುವ ಮಾಹಿತಿ‌ ಇದೀಗ ಕೇಳಿ ಬರುತ್ತಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಬುಧವಾರ ತಡರಾತ್ರಿ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಲಾರಿಗೆ ಬೆಂಕಿ ಹಿಡಿದಿದ್ದು, ಲಾರಿ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದರು‌. ಬಸ್ಸು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಹೊರಬಂದಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು. ಬೆಂಕಿಗಾಹುತಿಯಾದ ಬಸ್ಸಿನಲ್ಲಿ ತುಳು ಚಿತ್ರದ ಖ್ಯಾತನಟಿ ನೀಮಾ ರೇ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಿತ್ರನಟಿ ಸಹಿತ ಬಸ್ಸಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Also Read  ವ್ಯಾಪಕವಾಗಿ ಹರಡುತ್ತಿರುವ ಚರ್ಮಗಂಟು ರೋಗ ➤ 4,665  ಜಾನುವಾರುಗಳು ಸಾವು 

 

 

 

error: Content is protected !!
Scroll to Top