ಮುಂದುವರಿದ ಕೊರೋನಾ ಎರಡನೇ ಅಲೆ- ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ ➤ ಮದುವೆಗೆ 200 ಹಾಗೂ ರಾಜಕೀಯ, ಧಾರ್ಮಿಕ ಕಾರ್ಯಕ್ರಮಕ್ಕೆ 500 ಮಂದಿಗೆ ಅವಕಾಶ ➤ ನಿಯಮ ಉಲ್ಲಂಘನೆಯಾದಲ್ಲಿ 5ರಿಂದ 10 ಸಾವಿರದವರೆಗೆ ದಂಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 25. ಸಾರ್ವಜನಿಕ ಸ್ಥಳಗಳಲ್ಲಿ ಕೊರೋನಾ ನಿಯಮಾವಳಿಗಳನ್ನು ಪಾಲಿಸದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಬುಧವಾರ ಹೊಸ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ ಮತ್ತು ಅಂತರ ಕಾಪಾಡದಿದ್ದಲ್ಲಿ ಆಯೋಜಕರನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದೂ ತಿಳಿಸಿದೆ.

 

ಮಾಸ್ಕ್ ಧರಿಸದವರ ಮತ್ತು ಅಂತರ ಕಾಪಾಡದವರ ವಿರುದ್ಧ ಬಿಬಿಎಂಪಿ ಮತ್ತು ನಗರಸಭೆ ವ್ಯಾಪ್ತಿಯಲ್ಲಿ 250ರೂ. ಹಾಗೂ ಇತರ ಪ್ರದೇಶಗಳಲ್ಲಿ 100ರೂ. ದಂಡ ವಿಧಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾರ್ಷಲ್‌ಗಳು, ಇತರ ಕಡೆ ಹೆಡ್ ಕಾನ್ ಸ್ಟೇಬಲ್ ಹುದ್ದೆಗೂ ಮೇಲಿನ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಗ್ರಾಮ ಪಂಚಾಯತ್ ಕಾರ್ಯದರ್ಶಿ, ಬಿಲ್ ಕಲೆಕ್ಟರ್‌, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ದಂಡ ವಸೂಲಿ ಮಾಡುವ ಅಧಿಕಾರ ನೀಡಲಾಗಿದೆ ಎಂದು ಸರಕಾರ ತಿಳಿಸಿದೆ. ಯಾವುದೇ ಕಾರ್ಯಕ್ರಮದಲ್ಲಿ ನಿಗದಿತ ಜನರಿಗಿಂತ ಹೆಚ್ಚು ಜನ ಸೇರಿ ನಿಯಮ ಉಲ್ಲಂಘನೆಯಾದಲ್ಲಿ ಆ ಜಾಗದ ಮಾಲೀಕರೇ ಜವಾಬ್ದಾರಿ. ಇಂತಹ ಉಲ್ಲಂಘನೆಗಳಿಗೆ ಹವಾನಿಯಂತ್ರಿತವಲ್ಲದ ಸಭಾಂಗಣಗಳಿಗೆ ₹5 ಸಾವಿರ, ಧಾರ್ಮಿಕ ಹಾಗೂ ರಾಜಕೀಯ ರ್ಯಾಲಿಗಳು, ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್‌ ಗಳು, ಬ್ರಾಂಡೆಡ್ ಅಂಗಡಿಗಳು ಹಾಗೂ ಹೊರಾಂಗಣ ಕಾರ್ಯಕ್ರಮಗಳಿಗೆ ₹10 ಸಾವಿರ ದಂಡ ವಿಧಸಲಾಗುತ್ತದೆ. ಸಭಾಂಗಣದ ಮಾಲೀಕರು ಅಥವಾ ಆಯೋಜಕರು ಈ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ.

Also Read  ಕೊಕ್ಕಡ : ಗಂಡು ಕಾಡಾನೆ ಪ್ರತ್ಯಕ್ಷ                        


ಮದುವೆಗೆ ಹೊರಾಂಗಣ–500, ಒಳಾಂಗಣ–200, ಹುಟ್ಟುಹಬ್ಬದ ರೀತಿಯ ಕಾರ್ಯಕ್ರಮ- ಹೊರಾಂಗಣ–100, ಒಳಾಂಗಣ –50, ಸಾವು ಅಥವಾ ಅಂತ್ಯಕ್ರಿಯೆ; ಹೊರಾಂಗಣ –100, ಒಳಾಂಗಣ –50, ಧಾರ್ಮಿಕ, ರಾಜಕೀಯ ಕಾರ್ಯಕ್ರಮ- ಹೊರಾಂಗಣ– 500 ಮಂದಿ ಸೇರಬಹುದು ಎಂದು ತಿಳಿಸಲಾಗಿದೆ.

 

error: Content is protected !!
Scroll to Top