ಕೊರೋನಾ ನಿಯಂತ್ರಣಕ್ಕೆ ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ➤ ಯುಗಾದಿ, ಹೋಳಿ, ಬರಾಅತ್, ಗುಡ್ ಫ್ರೈಡೇ ಆಚರಣೆಗೆ ನಿಷೇಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.26. ಕೋವಿಡ್-19 ಎರಡನೇ ಅಲೆಯಿಂದಾಗಿ ದಿಢೀರ್ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರವು ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಟಿಸಿದೆ.

ಮುಂಬರುವ ಯುಗಾದಿ, ಹೋಳಿ, ಶಬೇ – ಬರಾಅತ್, ಗುಡ್ ಫ್ರೈಡೆ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡದಂತೆ ನಿಷೇಧ ಹೇರಿ ಸರಕಾರವು ಆದೇಶ ಹೊರಡಿಸಿದೆ. ಪರಿಷ್ಕೃತ ಮಾರ್ಗಸೂಚಿಯ ಅನ್ವಯ ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಹಬ್ಬಗಳ ಆಚರಣೆಯನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದರೆ ಎನ್‍ಡಿಎಂಎ ಕಾಯ್ದೆಯಡಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಹೊಸದಾಗಿ ಜಾರಿಗೆ ತಂದಿರುವ ಪರಿಷ್ಕೃತ ಮಾರ್ಗಸೂಚಿಯನ್ನು ಬಿಬಿಎಂಪಿ ಆಯುಕ್ತರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ ಪತ್ರದಲ್ಲಿ ಸೂಚನೆ ನೀಡಿದ್ದಾರೆ.

Also Read  ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ➤ 1 ಕೆಜಿ ಅಕ್ಕಿ ಹೆಚ್ಚುವರಿಯಾಗಿ ಉಚಿತ…!

 

 

 

error: Content is protected !!
Scroll to Top