? ಸಾಲಬಾಧೆಯಿಂದಾಗಿ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು



(ನ್ಯೂಸ್ ಕಡಬ) newskadaba.com ಹೈದರಾಬಾದ್‌, ಮಾ. 26.‌ ಸಾಲದ ಬಾಧೆಗೆ ತುತ್ತಾಗಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ಘಟನೆ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.







ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ್(40), ಪತ್ನಿ ಪದ್ಮ (35) ಮತ್ತು ಇಬ್ಬರು ಮಕ್ಕಳಾದ ಸೌಮ್ಯ ಹಾಗೂ ಅಕ್ಷಯ್‌ ಎಂದು ಗುರುತಿಸಲಾಗಿದೆ. ಇಡೀ ಕುಟುಂಬವು ಸಾಲಬಾಧೆ ಹಿನ್ನೆಲೆ “ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






 

error: Content is protected !!
Scroll to Top