ಮಾಣಿ: ತಾಂತ್ರಿಕ ದೋಷದಿಂದ ಕಾರಿಗೆ ಅಪ್ಪಳಿಸಿದ ಆಟೋ ರಿಕ್ಷಾ ➤ ಚಾಲಕ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.27. ಆಟೋ ರಿಕ್ಷಾವೊಂದರ ಹ್ಯಾಂಡ್ ಬ್ರೇಕ್ ಜಾಮ್ ಆದ ಕಾರಣ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಶನಿವಾರದಂದು ನಡೆದಿದೆ.





ಮೃತ ಚಾಲಕನನ್ನು ಕೊಡಾಜೆ ಪಂತಡ್ಕ ನಿವಾಸಿ ಹಮೀದ್(35) ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿದ್ದ ಹಮೀದ್ ರವರ ಪತ್ನಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ಇದ್ದಕ್ಕಿದ್ದಂತೆ ಹ್ಯಾಂಡ್ ಬ್ರೇಕ್ ಜಾಮ್ ಆಗಿದ್ದು, ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿಗೆ ಅಪ್ಪಳಿಸಿದೆ. ಢಿಕ್ಕಿಯ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

error: Content is protected !!
Scroll to Top