ಉಳ್ಳಾಲ: ರಿಕ್ಷಾ ಹಾಗೂ ಕಾರು ನಡುವೆ ಅಪಘಾತ- ರಿಕ್ಷಾ ಚಾಲಕ ಮೃತ್ಯು ➤ ವಿಟ್ಲ ಘಟನೆ ಮಾಸುವ ಮುನ್ನವೇ ಮತ್ತೋರ್ವ ಅಟೋ ಚಾಲಕನ ದಾರುಣ ಅಂತ್ಯ



(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 27. ರಿಕ್ಷಾ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ದಾರುಣವಾಗಿ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಸಂಭವಿಸಿದೆ.







ಮೃತಪಟ್ಟವರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮಪ್ರಸಾದ್ (45)ಎಂದು ಗುರುತಿಸಲಾಗಿದೆ. ಇವರು ಶನಿವಾರ ಬೆಳಗ್ಗೆ ಮನೆ ಸಮೀಪದಿಂದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದು, ಅಲ್ಲಿಂದ ಹಿಂತಿರುಗುತ್ತಿದ್ದ ಸಂದರ್ಭ ಹಿಂದಿನಿಂದ ಬರುತ್ತಿದ್ದ ಕಾರು ರಿಕ್ಷಾದ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಘಟನೆಯ ರಭಸಕ್ಕೆ ರಿಕ್ಷಾ ಚಾಲಕ ಹೊರಕ್ಕೆಸೆಯಲ್ಪಟ್ಟು, ಅವರ ಮೇಲೆ ಕಾರು ಚಲಿಸಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.






 

 

error: Content is protected !!
Scroll to Top