ಕಡಬ: ಇಂದು (ಮಾ. 27) “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ವತಿಯಿಂದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 27. “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ಕಡಬ ಇದರ ವತಿಯಿಂದ ಶನಿವಾರ ಸಂಜೆ 6:30ಕ್ಕೆ ಕಡಬದ ಹಳೆ ಸ್ಟೇಷನ್ ಬಳಿ ಕಡಬ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಪಂದ್ಯಾಟವು ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಲಿದ್ದು, ಕಡಬ ತಾಲೂಕಿನ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕಡಬ ತಾಲೂಕಿನ ಎಲ್ಲಾ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಆಟಗಾರರು ಮತ್ತು ಕ್ರೀಡಾಭಿಮಾನಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಹಾಗೂ ಇರುವಿಕೆಯನ್ನು ಪ್ರದರ್ಶಿಸುವ ಮೂಲಕ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್ ಹಳೆಸ್ಟೇಷನ್ ಕಡಬ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಡಬ: ಮನೆಯಲ್ಲಿ ಅಕ್ರಮ ಮರ ದಾಸ್ತಾನು ➤ ದಾಳಿ ನಡೆಸಿ ಮರ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

 

error: Content is protected !!
Scroll to Top