(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 27. ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಪಡಂಗಡಿ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಪೊಯ್ಯೆಗುಡ್ಡೆ ನಿವಾಸಿ ಜಾಬಿರ್ (34) ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾಬಿರ್ ಕಳೆದ 15 ದಿನಗಳ ಹಿಂದೆಯಷ್ಟೇ ವಿದೇಶದಿಂದ ಊರಿಗೆ ಮರಳಿದ್ದರು ಎನ್ನಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










