ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಯ ವಿರುದ್ದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 29. ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಟ್ಲ -ಪುತ್ತೂರು ರಸ್ತೆಯ ಕಬಕ ಸಮೀಪದ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇಲ್ಲಿಗೆ ಪುತ್ತೂರಿನ ಹನ್ನೊಂದು ವರ್ಷದ ಬಾಲಕ ಬಂದಿದ್ದು, ಅಲ್ಲದೇ ಇದೇ ಮದುವೆ ಕಾರ್ಯಕ್ರಮಕ್ಕೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ. ಘಟನೆಯನ್ನು ಕುರಿತು ಬಾಲಕ ಮನೆಯಲ್ಲಿ ತಿಳಿಸಿದ್ದು,
ಬಳಿಕ ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ವಿರುದ್ಧ ದೂರು ನೀಡಿದ್ದು, ಈ ಕುರಿತು ವಿಟ್ಲ ಠಾಣೆಯಲ್ಲಿ ಭಾನುವಾರದಂದು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Also Read  ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆ ➤ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಲ್ಲಿಸಿದ್ದೆ ತಪ್ಪಾಯಿತೇ?

 

 

error: Content is protected !!
Scroll to Top