?ಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ- ಪಾದಚಾರಿ ಸ್ಥಳದಲ್ಲೇ ಮೃತ್ಯು ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 29. ಮದ್ಯ ಸೇವಿಸಿದ್ದ ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಲಾಯಿಸಿದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕದ್ರಿ ಪ್ರವಾಸಿ ಮಂದಿರ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತಪಟ್ಟವರನ್ನು ಬಿಎಸ್‌ಎನ್‌ಎಲ್‌ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ. ಆರೋಪಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮಂಗಳೂರು ಉಪ ವಿಭಾಗದ ಎಇಇ ಶಣ್ಮುಗಂ ಎಂಬವರನ್ನು ಬಂಧಿಸಲಾಗಿದೆ. ಭಾನುವಾರ ರಾತ್ರಿ 9.53ರ ಸುಮಾರಿಗೆ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆನಂದ ಎಂಬವರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಾದಚಾರಿ ಸುಮಾರು ದೂರದವರೆಗೆ ಎಗರಿ ಬಿದ್ದು ಮೃತಪಟ್ಟಿದ್ದು, ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

 

 

Scroll to Top