?ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 29. ಇಲ್ಲಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಕಬಕ ನಿವಾಸಿ ಹಮೀದ್ ಯಾನೆ ಮೌಲ ಅಮ್ಮಿ ಎಂಸು ಗುರುತಿಸಲಾಗಿದೆ. ಈತ ಮದುವೆ ಕಾರ್ಯಕ್ರಮವೊಂದಕ್ಕೆ ತನ್ನ ಹೆತ್ತವರೊಂದಿಗೆ ಬಂದಿದ್ದ ಅಪ್ರಾಪ್ತ ಬಾಲಕನೋರ್ವನನ್ನು ಪುಸಲಾಯಿಸಿ ಸ್ವಲ್ಪ ದೂರ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ವೇಳೆ ಬಾಲಕನು ಅಲ್ಲಿಂದ ತಪ್ಪಿಸಿಕೊಂಡಿದ್ದು, ಬಳಿಕ ಮನೆಗೆ ಬಂದು ಪೋಷಕರೊಂದಿಗೆ ಘಟನೆಯ ಕುರಿತು ತಿಳಿಸಿದ್ದಾನೆ. ಈ ಬಗ್ಗೆ ಸಂತ್ರಸ್ಥ ಬಾಲಕನ ತಂದೆ ವಿಟ್ಲ ಪೊಲೀಸ್ ಠಾಣೆಗೆ ನೀಡಿದ್ದ ದೂರಿನಂತೆ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Also Read  ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

 

error: Content is protected !!
Scroll to Top