ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಮಹಿಳೆ ಮೃತ್ಯು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 30. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ಮಹಿಳೆ‌‌ಯೋರ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಹೆಮ್ಮಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತಪಟ್ಟವರನ್ನು ಉಡು‌ಪಿ ಜಿಲ್ಲೆಯ ಕೆಮ್ಮಣ್ಣು ಹೂಡೆಯ ನಿವಾಸಿ ಸುಹಾನಾ (30) ಎಂದು ಗುರುತಿಸಲಾಗಿದೆ. ಇವರ ಪತಿ ಸಿಬ್ಗತುಲ್ಲಾ, ಮಕ್ಕಳಾದ ಸಾಹಿಮ್, ಸಿದ್ರಾ, ಮನ್ಹಾ, ಮರಿಯಮ್ ಗಾಯಗೊಂಡಿದ್ದಾರೆ. ಭಟ್ಕಳದಿಂದ ಹೂಡೆಗೆ ಬರುತ್ತಿದ್ದ ವೇಳೆ ಸಿಬ್ಗತ್ತುಲ್ಲಾ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

 

Scroll to Top