ಮಂಗಳೂರು ವಿವಿಯಲ್ಲಿ ಕೊರೋನಾ ಮಿತಿಮೀರಿದ ಹಿನ್ನೆಲೆ ➤ ಎ. 03ರ ವರೆಗೆ ತರಗತಿ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 30. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೊರೋನಾ ಸೋಂಕು ಮಿತಿಮೀರಿದ ಹಿನ್ನೆಲೆಯಲ್ಲಿ ಸ್ನಾತಕೋತ್ತರ‌ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದ ತರಗತಿಗಳನ್ನು ಎಪ್ರಿಲ್ 3ರ ವರೆಗೆ ಬಂದ್ ಮಾಡಲಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ‌ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಕೊರೊನಾ‌ ಸೋಂಕು ಕಾಣಿಸಿಕೊಂಡಿದ್ದು, ಹೀಗಾಗಿ ಮಾರ್ಚ್ 29ರ ವರೆಗೆ ತರಗತಿಗಳನ್ನು ಮುಚ್ಚಲಾಗಿತ್ತು, ಆದರೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಮತ್ತೆ 5 ದಿ‌‌ನಗಳ ಮುಚ್ಚಲಾಗಿದೆ. ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಮನೆಗಳಿಗೆ ತೆರಳದಂತೆ ಆದೇಶಿಸಲಾಗಿದೆ.

Also Read  ಕೊಣಾಜೆಗೆ ತೆರಳುವ ಸರಕಾರಿ ಬಸ್ಸು ಹಠಾತ್ ಸಂಚಾರ ಸ್ಥಗಿತ ► ವಿದ್ಯಾರ್ಥಿಗಳಿಂದ ಸಂಚಾರ ನಿಯಂತ್ರಕರ ಕೇಂದ್ರಕ್ಕೆ ಮುತ್ತಿಗೆ

error: Content is protected !!
Scroll to Top