ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ➤ ಓರ್ವ ಅರೆಸ್ಟ್, ಮತ್ತೋರ್ವ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 30. ಕಸ್ಬಾ ಗ್ರಾಮದ ಮಂಡಾಡಿ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲೀಸರು ಓರ್ವನನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

ಬಂಧಿತನನ್ನು ಮೂಡನಡುಗೋಡು ಗ್ರಾಮದ ಮಜಲೋಡಿ ನಿವಾಸಿ ಸತೀಶ್ ಕುಮಾರ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಸಜೀಪ ಕಾರಾಜೆ ನಿವಾಸಿ ಪ್ರದೀಪ್ ಕುಮಾರ್ ಎಂಬಾತ ಪರಾರಿಯಾಗಿದ್ದಾನೆ. ಆತನ ಬಂಧನಕ್ಕಾಗಿ ಇದೀಗ ಪೋಲೀಸರು ಬಲೆ ಬೀಸಿದ್ದಾರೆ. ಸತೀಶ್ ಎಂಬಾತ ಮಂಡಾಡಿಯಲ್ಲಿ ಬಾಡಿಗೆ ಮನೆ ತಗೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ. ದಾಳಿ ಸಂದರ್ಭ ಮನೆಯಲ್ಲಿದ್ದ ಸುಮಾರು ಆರು ಸಾವಿರ ರೂ ನಗದು ಹಾಗೂ ಕೆಲವೊಂದು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Also Read  ಶಾಸ್ತ್ರೀಯ ಮತ್ತು ಜಾನಪದ ನೃತ್ಯ ತರಬೇತಿ ತರಗತಿ ಉದ್ಘಾಟನೆ

 

error: Content is protected !!
Scroll to Top