ಮುಂದುವರಿದ ಕೊರೋನಾ ಅಟ್ಟಹಾಸ ➤ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.30. ಕೊರೊನಾ ವೈರಸ್‌ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ. ಇದಲ್ಲದೆ ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಮೇಳ, ಜಾತ್ರೆ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್‌ ಸೋಂಕು ಹರಡುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದು, ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ.

Also Read  ಫಾಝಿಲ್ ಹತ್ಯೆಯಲ್ಲಿ ಬಳಸಲಾದ ಕಾರು ಕಾರ್ಕಳದಲ್ಲಿ ಪತ್ತೆ ➤ ಕಾರು ಮಾಲಕ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ

 

 

error: Content is protected !!
Scroll to Top