ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 31. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಇಲ್ಲಿನ ಎಸ್.ವಿ.ಎಸ್ ಕಾಲೇಜಿನ ಬಳಿ ನಡೆದಿದೆ.

 

ವಾಮದಪದವು, ಪೂಂಜಾಲಕಟ್ಟೆ, ಮೂರ್ಜೆ ಮಾರ್ಗವಾಗಿ ಬಿಸಿ ರೋಡಿಗೆ ಬರುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಇದರಲ್ಲಿ ಪರೀಕ್ಷೆಗೆಂದು ತೆರಳುತ್ತಿದ್ದ ವಿದ್ಯಾರ್ಥಿಗಳ ಸಹಿತ 25 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಸುಮಾರು 12 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಇವರುನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಅಯೋಧ್ಯೆ ವಿವಾದಕ್ಕೆ ಸುಪ್ರೀಂ ತೆರೆ

error: Content is protected !!
Scroll to Top