ಅಕ್ರಮ ಸಂಬಂಧದಲ್ಲಿ ಬಿರುಕು ➤ ಪ್ರಿಯತಮೆಯ ಮಗನನ್ನೇ ಕತ್ತು ಹಿಸುಕಿ ಕೊಲೆಗೈದ ಪ್ರಿಯತಮ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಮಾ. 31. ಪ್ರಿಯಕರನೋರ್ವ ತನ್ನ ಪ್ರಿಯತಮೆಯ 6 ವರ್ಷದ ಮಗನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಕಾಣೆಯಾಗಿದ್ದ 6 ವರ್ಷದ ಬಾಲಕನ ಅಸ್ಥಿಪಂಜರ ಪತ್ತೆಯಾಗಿದೆ.


ಕೊಲೆಯಾದವನ್ನು ವಾಟದ ಹೊಸಹಳ್ಳಿಯ ವಿಷ್ಣುವರ್ಧನ್ (6) ಎಂದು ಗುರುತಿಸಲಾಗಿದೆ. ಆರೋಪಿ ವಾಟದ ಹೊಸಹಳ್ಳಿ ಗ್ರಾಮದ ರಾಮಾಂಜಿ ಎಂಬಾತ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ್ದು, ಗೌರಿಬಿದನೂರು ತಾಲೂಕಿನ ಸಾದರ್ಲಹಳ್ಳಿ ಬಳಿ ಬಾಲಕನ ಅಸ್ಥಿಪಂಜರ ಪತ್ತೆಯಾಗಿದೆ. ಬಾಲಕ ವಿಷ್ಣುವರ್ಧನ್ ಪ್ರಭಾವತಿ ಹಾಗೂ ನಾರಾಯಣಸ್ವಾಮಿ ದಂಪತಿಯ ಮಗನಾಗಿದ್ದು, ಮಾರ್ಚ್ 16 ರಂದು ನಿಗೂಢವಾಗಿ ಕಾಣೆಯಾಗಿದ್ದ. ವಿಷ್ಣುವರ್ಧನ್ ನಾಪತ್ತೆ ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಪಹರಣ ಹಾಗೂ ಕೊಲೆ ಸತ್ಯ ಬಯಲಾಗಿದೆ. ಪ್ರಭಾವತಿ ಹಾಗೂ ರಾಮಾಂಜಿ ನಡುವೆ ಅನೈತಿಕ ಹೊಂದಿದ್ದು ಇತ್ತೀಚೆಗೆ ಇವರಿಬ್ಬರ ಮಧ್ಯೆ ಭಿನ್ನಾಭಿಪ್ರಾಯ ಮೂಡಿ ಬೇರೆ ಬೇರೆಯಾಗಿದ್ದರು. ಇದೇ ದ್ವೇಷದಿಂದ ಹಾಗೂ ಪ್ರಭಾವತಿಯನ್ನು ಮತ್ತೆ ಒಲಿಸಿಕೊಳ್ಳಲು ವಿಷ್ಣುವರ್ಧನ್‍ ನನ್ನು ರಾಮಾಂಜಿ ಅಪಹರಿಸಿದ್ದಾನೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಪ್ರಕರಣ ದಾಖಲಾಗಿದ್ದು ಆರೋಪಿಯು ರಾಮಾಂಜಿ ಬಾಲಕ ವಿಷ್ಣುವರ್ಧನ್‍ನ ಕತ್ತು ಹಿಸುಕಿ ಕೊಲೆ ಮಾಡಿ, ಮೂಟೆಯಲ್ಲಿ ಹಾಕಿ ಬಿಸಾಡಿದ್ದ ಎಂದು ಸತ್ಯ ಬಾಯಿ ಬಿಟ್ಟಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Also Read  ಉಳ್ಳಾಲ: ಮಹಿಳೆಗೆ ಅತ್ಯಾಚಾರ ಹಾಗೂ ಮಕ್ಕಳಿಗೆ ಕಿರುಕುಳ ಪ್ರಕರಣ ➤ ಎಸ್ಡಿಪಿಐ ಮುಖಂಡನ ಬಂಧನ

 

error: Content is protected !!
Scroll to Top