ಕಡಬದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.01. ಕಡಬದ ವಿದ್ಯಾರ್ಥಿಯೋರ್ವ ಮಂಗಳೂರಿನಲ್ಲಿ ಮೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕಡಬ ತಾಲೂಕಿನ ಇಚಿಲಂಪಾಡಿ ನಿವಾಸಿ ರಿನು ವರ್ಗೀಸ್(20) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ರಿನು ವರ್ಗೀಸ್, ಬುಧವಾರ ರಾತ್ರಿ ತಾನು ತಂಗಿದ್ದ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Scroll to Top