ಸುಳ್ಯ: ಜ್ಯುವೆಲ್ಲರಿ ಮಾರ್ಟ್ ಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ ಹಾಗೂ ನಗದು ಜೊತೆ ಸಿಸಿ ಕ್ಯಾಮರಾ ಹೊತ್ತೊಯ್ದರು

(ನ್ಯೂಸ್ ಕಡಬ) newskadaba.com ಸುಳ್ಯ, ಏ. 01. ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ಬುಧವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.


ಚಿನ್ನದ ಅಂಗಡಿಯ ಬೀಗ ಮುರಿದಿರುವ ವಿಷಯ ತಿಳಿದ ಸ್ಥಳೀಯರು, ಅಂಗಡಿ ಮಾಲಕರು ಹಾಗೂ ಪೋಲೀಸರು ಬಂದು ಪರಿಶೀಲಿಸಿದಾಗ ಚಿನ್ನಾಭರಣ ಹಾಗೂ ನಗದು ಜೊತೆಗೆ ಸಿಸಿ ಕ್ಯಾಮರಾವನ್ನೂ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕಳವಾದ ಸ್ವತ್ತುಗಳ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

Scroll to Top