? ಮಂಗಳೂರು ಮೂಲದ ಉದ್ಯಮಿ ವಿಜಯಪುರದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಜಯಪುರ, ಎ. 01. ಇಲ್ಲಿನ ಇಂಡಿ ಎಂಬಲ್ಲಿ ಅಮರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿಯೋರ್ವರು ಕೊರೋನಾ ವೈರಸ್ ನಿಂದಾಗಿ ಹೋಟೆಲ್ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿದ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮಂಗಳೂರು ಮೂಲದ ಗಣೇಶ್ ಎಂದು ಗುರುತಿಸಲಾಗಿದೆ. ಇವರು ಹೋಟೆಲ್ ನಡೆಸಲು 30 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಇದರ ಬಡ್ಡಿ ಕಟ್ಟಲಾಗದೇ ಒದ್ದಾಡುತ್ತಿದ್ದರು. ಅಲ್ಲದೇ ಕೊರೋನಾದಿಂದಾಗಿ ಹೋಟೆಲ್​​ ಕೂಡಾ ಸರಿಯಾಗಿ ನಡೆಯದೆ ಚಿಂತೆಗೀಡಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಇಂಡಿ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಆರೆಸ್ಸೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ 8 ಮಂದಿಯ ಬಂಧನ

error: Content is protected !!
Scroll to Top