ಮಾಣಿ: ಕಾರು ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಮಹಿಳೆ ಹಾಗೂ ಮಗು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಎ. 01. ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಹಾಗೂ ಮಗು ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ.


ಮಹಿಳೆಯು ನೇರಳಕಟ್ಟೆ ಹಾಲ್ ನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಗಡಿಯಾರದ ತಮ್ಮ ಮನೆ ಕಡೆಗೆ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ
ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಮಹಿಳೆ ಹಾಗೂ ಮಗು ಗಾಯಗೊಂಡಿದ್ದು, ಇವರಿಬ್ಬರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ನಾಳೆ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ತರ ಪೂರ್ವ ತಯಾರಿ ಸಭೆ

 

error: Content is protected !!
Scroll to Top