ರಾಜ್ಯದಾದ್ಯಂತ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ 6ರಿಂದ 9ನೇ ವರೆಗೆ ಶಾಲೆ ಬಂದ್- ಶಿಕ್ಷಣ ಸಚಿವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 01. ರಾಜ್ಯದಾದ್ಯಂತ ಕೊರೋನಾ ರಾದ್ದಾಂತ ಹೆಚ್ಚಳವಾಗುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ 6 ರಿಂದ 9ನೇ ತರಗತಿವರೆಗಿನ ಶಾಲೆಯನ್ನು ಬಂದ್ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.

ಬೆಂಗಳೂರಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 6 ರಿಂದ 9ನೇ ವರೆಗಿನ ತರಗತಿಗಳನ್ನು ಮುಂದಿನ ಆದೇಶದವರೆಗೂ ಬಂದ್ ಮಾಡಲಾಗಿದ್ದು, ಎಸ್ಸೆಸ್ಸೆಲ್ಸಿ ತರಗತಿಗಳು ಎಂದಿನಂತೆಯೇ ನಡೆಯಲಿದೆ ಎಂದ ಅವರು, ವಿದ್ಯಾರ್ಥಿಗಳಿಗೆ ತರಗತಿಗಳಿಗೆ ನೀಡಲಾದ ಕಡ್ಡಾಯ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Also Read  ಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿ ಹತ್ಯೆ ಕೇಸ್ ➤ಆರೋಪಿಗಾಗಿ ಮುಂದುವರಿದ ಶೋಧ

error: Content is protected !!
Scroll to Top