ನೆಲ್ಯಾಡಿ: ರಸ್ತೆಗುರುಳಿದ ಕಂಟೇನರ್ ಲಾರಿ ➤ ಚಾಲಕನಿಗೆ ಗಾಯ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.02. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.







ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿಯು ಗೋಳಿತೊಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

 

error: Content is protected !!
Scroll to Top