ದ.ಕ ಜಿಲ್ಲಾ ನೂತನ ಎಸ್ಪಿಯಾಗಿ ಎಸ್.ಆರ್. ಭಗವಾನ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 02. ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅವರು ಶುಕ್ರವಾರದಂದು ಅಧಿಕಾರ ಸ್ವೀಕರಿಸಿದರು.

ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಇವರನ್ನು ದ.ಕ. ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರದಂದು ಆದೇಶ ಹೊರಡಿಸಿತ್ತು. ಆದೇಶದಂತೆ ಇಂದು ಜಿಲ್ಲೆಗೆ ಆಗಮಿಸಿದ ಅವರು ನಿರ್ಗಮನ ಎಸ್ಪಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರಿಂದ ಅಧಿಕಾರ ವಹಿಸಿಕೊಂಡರು.

Scroll to Top