ದಕ್ಷಿಣ ಕನ್ನಡ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಕಠಿಣ ಕಟ್ಟೆಚ್ಚರ ➤ ಎಪ್ರಿಲ್ 20 ರ ವರೆಗೆ ಜಿಮ್, ಸ್ವಿಮ್ಮಿಂಗ್ ಪೂಲ್, ಶೈಕ್ಷಣಿಕ ಚಟುವಟಿಕೆ ಬಂದ್

ಬೆಂಗಳೂರು, ಎ.02. ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಇಂದು ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್ ಗಳನ್ನು ಎಪ್ರಿಲ್ 20ರ ವರೆಗೆ ಬಂದ್ ಮಾಡಿ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ವಿದ್ಯಾಗಮ ಸೇರಿ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದ್ದು, 10, 11 ಮತ್ತು 12ನೇ ತರಗತಿ ಯಥಾಸ್ಥಿತಿ ಮುಂದುವರಿಯಲಿದೆ. ರ್‍ಯಾಲಿ, ಧರಣಿ, ಮುಷ್ಕರಗಳನ್ನು ನಿಷೇಧಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ, ಮೈಸೂರು, ಕಲಬುರಗಿ ಈ 8 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ವಿಧಿಸಲಾಗಿದ್ದು, ಧಾರ್ಮಿಕ ಸ್ಥಳಗಲ್ಲಿ ವೈಯುಕ್ತಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲಾಗಿದೆ. ಆದರೆ ಗುಂಪು ಸೇರುವ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ. ಥಿಯೇಟರ್ ಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಂಟು ಜಿಲ್ಲೆಗಳಲ್ಲಿ ಬಾರ್, ಪಬ್, ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಗ್ರಾಹಕರ ಸಂಖ್ಯೆ 50ಶೇ. ಮೀರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Also Read  "ಜಗತ್ತಿನಲ್ಲಿ ಸಾಮರಸ್ಯ ಹಾಗೂ ಬಾಂಧವ್ಯ ಪೂರಿತವಾದ ಸುಂದರ ಬದುಕನ್ನು ಕಟ್ಟುವ"- ತಮ್ಮಣ್ಣ ಶೆಟ್ಟಿ ಶಂಭುಗ

 

 

error: Content is protected !!
Scroll to Top