ಮಲ್ಪೆ: ? ಹಾವು ಕಚ್ಚಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಲ್ಪೆ, ಎ. 03. ಹಾವು ಕಚ್ಚಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.

ಮೃತರನ್ನು ಸಬಿತಾ(43) ಎಂದು ಗುರುತಿಸಲಾಗಿದೆ. ಇವರು ಶುಕ್ರವಾರದಂದು ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ವೇಳೆ ತೆಂಗಿನಕಟ್ಟೆಯಲ್ಲಿನ ಹುಲ್ಲು ತೆಗೆಯುತ್ತಿದ್ದಾಗ ಇವರ ಕಾಲಿಗೆ ವಿಷಪೂರಿತ ಹಾವೊಂದು ಕಚ್ಚಿದೆ. ತಕ್ಷಣ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ವಾರ್ಡ್ ಗೆ ಸ್ಥಳಾಂತರಿಸಿಲಾಗಿತ್ತು. ಸ್ವಲ್ಪ ಸಮಯದ ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Also Read   ಬಾಲಕಿಯ ಜೊತೆ ಅಸಭ್ಯ ವರ್ತನೆ   ➤ ಹಿಗ್ಗಾ ಮುಗ್ಗಾ ಥಳಿಸಿದ ಪೋಷಕರು..!!!                

error: Content is protected !!
Scroll to Top