ವಿಟ್ಲ: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 03. ಟಿಪ್ಪರ್, ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರನೋರ್ವ ಗಾಯಗೊಂಡ ಘಟನೆ ಘಟನೆ ಕಲ್ಲಡ್ಕ- ಕಾಂಞಂಗಾಡ್ ಹೆದ್ದಾರಿಯ ಉಕ್ಕುಡ- ಅಪ್ಪೆರಿಪಾದೆ ಎಂಬಲ್ಲಿ ನಡೆದಿದೆ.


ಗಾಯಗೊಂಡವರನ್ನು ದ್ವಿಚಕ್ರ ವಾಹನ ಸವಾರ ಮುಳಿಯ ತಾಳಿಪಡ್ಪು ನಿವಾಸಿ ರತ್ನಾಕರ ಶೆಟ್ಟಿ (43) ಎಂದು ಗುರುತಿಸಲಾಗಿದೆ. ಪೆರ್ಲ ಕಡೆಯಿಂದ ವಿಟ್ಲಕ್ಕೆ ಹೋಗುತ್ತಿದ್ದ ಬಲೆನೊ ಕಾರೊಂದು ಟಿಪ್ಪರ್ ಅನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರವಾಹನಕ್ಕೆ ಇನ್ನೇನು ಢಿಕ್ಕಿ ಹೊಡೆಯುವುದರಲ್ಲಿತ್ತು. ಇದನ್ನು ತಪ್ಪಿಸಲು ಹೋದ ಕಾರು ಟಿಪ್ಪರ್ ಗೆ ಡಿಕ್ಕಿ ಹೊಡೆದು, ಬಳಿಕ ದ್ಚಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ರಸ್ತೆಯ ಬಲಭಾಗದಲ್ಲಿದ್ದ ಮಣ್ಣಿನ ದಿಬ್ಬದ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Scroll to Top