ಧರ್ಮಸ್ಥಳ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ 15ಕ್ಕೂ ಅಧಿಕ ಮಂದಿಗೆ ಗಾಯ



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ. 04. ಮದುವೆ ಕಾರ್ಯಕ್ರಮದ ನಿಮಿತ್ತ ಮೈಸೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ಶನಿವಾರ ರಾತ್ರಿ ನಡೆದಿದೆ.








ಮದುವೆ ನಿಮಿತ್ತ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಒರ್ವನಿಗೆ ಗಂಭೀರ ಗಾಯಗಳಾಗಿವೆ. ಬಸ್ಸಿನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದು, ಘಟನೆ ನಡೆದ ತಕ್ಷಣವೇ ಸ್ಥಳೀಯರು ಸ್ಪಂದಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಸ್ಸಿನಲ್ಲಿ ಸಿಲುಕಿದವರನ್ನು ಕೂಡಲೇ ಹೊರಕ್ಕೆಳೆದು ಗಾಯಾಳುಗಳನ್ನು ಉಜಿರೆ ಹಾಗೂ ಬೆಳ್ತಂಗಡಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top