? ಮಂಗಳೂರು: ಹನ್ನೆರಡರ ಬಾಲಕನ ಕೊಲೆಗೈದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಉಳ್ಳಾಲ, ಎ. 04. ದುಷ್ಕರ್ಮಿಗಳ ತಂಡವೊಂದು ಅಪ್ರಾಪ್ತ ವಯಸ್ಸಿನ ಬಾಲಕನೋರ್ವನನ್ನು ಕೊಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿರುವ ನಿರ್ಜನ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದಿದೆ.

ಕೊಲೆಯಾದವನನ್ನು ಕೆ.ಸಿ.ರೋಡ್ ಕೋಮರಂಗಳ ನಿವಾಸಿ ಹನೀಫ್ ಎಂಬವರ ಪುತ್ರ ಆಕಿಫ್ (12) ಎಂದು ಗುರುತಿಸಲಾಗಿದೆ. ಆಕಿಫ್ ಶನಿವಾರದಂದು ರಾತ್ರಿ 9 ಗಂಟೆಯ ಸುಮಾರಿಗೆ ಮದ್ರಸದಿಂದ ಮನೆಗೆ ಬಂದಿದ್ದು, ಬಳಿಕ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಬಾಲಕ ನಾಪತ್ತೆಯಾಗಿದ್ದ‌. ಆತನಿಗಾಗಿ ಹುಡುಕಾಟ ನಡೆಸಿದಾಗ ಇಲ್ಲಿನ ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಕಮಿಷನರ್ ಶಶಿಕುಮಾರ್ ಹಾಗೂ ಉಳ್ಳಾಲ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Also Read  ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಪರೀಕ್ಷೆಗೆ ಒಳಗಾಗಿ ➤ ಡಾ. ನವೀನ್ ಚಂದ್ರ

 

error: Content is protected !!
Scroll to Top