ಮಂಗಳೂರು: 12ರ ಬಾಲಕನ ಕೊಲೆ ಪ್ರಕರಣ ➤ ಓರ್ವ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಎ.04. ಹಾಕಿಬ್ (12) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಮೊಬೈಲ್ ಗೆ ಕೊನೆಯ ಕರೆಯ ಆಧಾರದಲ್ಲಿ ಸ್ಥಳೀಯವಾಗಿ ವಾಸಿಸುತ್ತಿರುವ ಯುವಕನೋರ್ವನನ್ನು ಪೊಲೀಸರು ತನಿಖೆ ನಡೆಸಲು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

 

ಆನ್ ಲೈನ್ ಗೇಮ್ ನಲ್ಲಿ ಸೋತ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ಬಾಲಕ ರಾತ್ರಿ ಪೋನ್ ಕರೆಯ ಬಳಿಕ ಮನೆಯಿಂದ ಹೊರಗೆ ಹೋಗಿದ್ದನೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಬಾಲಕ ಮನೆಯ ಸಮೀಪ ವೇಗವಾಗಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾಗಿರುವುದಾಗಿ ವರದಿಯಾಗಿದೆ. ಪೊಲೀಸರ ಸಂಪೂರ್ಣ ತನಿಖೆಯ ಬಳಿಕವೇ ಘಟನೆಯ ಸತ್ಯಾಂಶ ತಿಳಿದು ಬರಬೇಕಿದೆ.

Also Read  ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ➤ ಶ್ರೀ ಕೃಷ್ಣ ಜನ್ಮೋತ್ಸವ ಸ್ಪರ್ಧೆಗಳ ಉದ್ಘಾಟಣಾ ಸಮಾರಂಭ

 

error: Content is protected !!
Scroll to Top