ಉಳ್ಳಾಲ: ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಎ. 04. ಇಲ್ಲಿನ ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆಯಾಗಿದ್ದು, ಆಡಳಿತ ಸಮಿತಿಯು ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.

ಕೆಲ ತಿಂಗಳ ಹಿಂದೆಯಷ್ಟೇ ಉಳ್ಳಾಲ ಭಾಗದಲ್ಲಿನ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿದ್ದು, ಮೂರು ದಿನಗಳ ಹಿಂದೆಯಷ್ಟೇ ಇಬ್ಬರು ಆರೋಪಿಗಳ ಬಂಧನವಾಗಿತ್ತು. ಇದೇ ಸಂದರ್ಭದಲ್ಲಿ ಕಾರಣಿಕ ಕ್ಷೇತ್ರ‌ ಕೊಂಡಾಣ ದೇವಸ್ಥಾನದಲ್ಲಿಯೂ ಆರೋಪಿಗಳು ದುಷ್ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ಪೊಲೀಸ್ ಸಬ್‍ಇನ್ಸ್‍ಫೆಕ್ಟರ್ (ಸಿವಿಲ್) ಹುದ್ದೆಗಳ ಮೌಖಿಕ ಪರೀಕ್ಷೆ

 

error: Content is protected !!
Scroll to Top