ಕಡಬ: ಕಾರು-ಆ್ಯಕ್ಟಿವಾ ನಡುವೆ ಢಿಕ್ಕಿ ➤ ಕಾರು ಚಾಲಕ ಗಂಭೀರ



(ನ್ಯೂಸ್ ಕಡಬ) newskadaba.com ಕಡಬ, ಎ.04. ಕಾರು ಹಾಗೂ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಎಂಬಲ್ಲಿ ಭಾನುವಾರದಂದು ನಡೆದಿದೆ.





ರಾಮಕುಂಜದ ವ್ಯಕ್ತಿಯದ್ದು ಎನ್ನಲಾದ ರೆನಾಲ್ಟ್‌ ಕ್ವಿಡ್ ಕಾರು ಹಾಗೂ ಆ್ಯಕ್ಟಿವಾ ನಡುವೆ ಕುಂತೂರು ಸಮೀಪದ‌ ಕೋಚಕಟ್ಟೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಮುಂದುವರಿದು ಕಾರು ಸಮೀಪದಲ್ಲಿದ್ದ ಕಟ್ಟೆಯೊಂದಕ್ಕೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

error: Content is protected !!
Scroll to Top