ಕಡಬ: ನೇಣುಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಎ.05. ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಸೋಮವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಎಂದು ಗುರುತಿಸಲಾಗಿದೆ. ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈಕೆಯು ವೈಯಕ್ತಿಕ ಕಾರಣಕ್ಕಾಗಿ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

 

 

Scroll to Top