ಸುಬ್ರಹ್ಮಣ್ಯ: ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಎ. 07. ಆನೆ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಮಕಾರಿನಲ್ಲಿ ನಡೆದಿದೆ.








ಮೃತರನ್ನು ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ(80) ಎಂದು ಗುರುತಿಸಲಾಗಿದೆ. ಇವರ ಮನೆಯಿಂದ ಸುಮಾರು ಅರ್ಧ ಕಿಲೋ ಮೀಟರ್ ದೂರದ ಕಾಡಿನಲ್ಲಿ ನೀರಿನ ಪೈಪ್ ಸರಿಮಾಡಲೆಂದು ಶಿವರಾಮ ಗೌಡ ಹೋಗಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಪೈಪ್ ಸರಿ ಮಾಡಲು ಹೋದ ವಯೋ ವೃದ್ಧರಾದ ಶಿವರಾಮ ಗೌಡರು ಹಿಂತಿರುಗಿ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದಾಗ ಆನೆ ದಾಳಿ ಮಾಡಿ ಇವರು ಗಾಯಗೊಂಡಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಇವರನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.






error: Content is protected !!
Scroll to Top