ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಎ. 07. ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ವಿಟ್ಲ ಪೊಲೀಸರು ಕೊಡಂಗಾಯಿ ಎಂಬಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಾಸಿರ್ ಎಂದು ಗುರುತಿಸಲಾಗಿದೆ. ವಿಟ್ಲ ಠಾಣಾ ಎಸ್ಐ ವಿನೋದ್ ರೆಡ್ಡಿ ನೇತೃತ್ವದ ತಂಡವು ವಿಟ್ಲದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಸಾಲೆತ್ತೂರು ಕಡೆಯಿಂದ ಬಂದ ಬಿಳಿ ಬಣ್ಣದ ಆಲ್ಟೋ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಕಾರಿನಲ್ಲಿ ಚಾಲಕ ಮಾತ್ರವೇ ಇದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಒಂದು ಪ್ಲಾಸ್ಟಿಕ್ ಕವರಿನಲ್ಲಿ ತುಂಬಿಸಿದ್ದ ಕಟ್ಟನ್ನು ಪರಿಶೀಲಿಸಿದಾಗ ಗಾಂಜಾ ಇರುವುದು ಕಂಡುಬಂದಿದೆ. ಈ ಕುರಿತು ತನಿಖೆ ನಡೆಸಿದಾಗ. ತಾನು ಅಕ್ರಮವಾಗಿ ಗಾಂಜಾವನ್ನು ವಿಟ್ಲ, ಬಿ.ಸಿ ರೋಡ್ ಕಡೆಗಳಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದು, ಅದರಲ್ಲಿ ಸುಮಾರು 2 ಕೆಜಿಯಷ್ಟು ಗಾಂಜಾ ಇದ್ದು, ನನಗೆ ಬಾರಕ್ ಹಾಗೂ ಮುಸ್ತಾಫ ಎಂಬವರು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ನೀಡಿರುವುದಾಗಿ ತಿಳಿಸಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಮಂಗಳೂರು: ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

error: Content is protected !!
Scroll to Top