ಹುಲಿ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರ ಬಂಧನ

(ನ್ಯೂಸ್ ಕಡಬ) newskadaba.com ಹೆಬ್ರಿ, ಎ. 07. ಹುಲಿಯ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಸೋಮೇಶ್ವರ ಚೆಕ್ ಪೋಸ್ಟ್‌ ಬಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಹುಬ್ಬಳ್ಳಿಯಿಂದ ಮಂಗಳೂರಿನ ಕಡೆ ಬೈಕ್‍ ಗಳಲ್ಲಿ ಹುಲಿಯ ಎರಡು ಚರ್ಮ ಮತ್ತು ಉಗುರುಗಳನ್ನು ಸಾಗಿಸುತ್ತಿದ್ದ ವೇಳೆ ಚೆಕ್‍ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ಹುಲಿಯ ಉಗುರು, ಚರ್ಮ ಅಲ್ಲದೇ ಬೈಕ್ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚರ್ಮ ಮತ್ತು ಉಗುರುಗಳನ್ನು ಪರೀಕ್ಷೆಗಾಗಿ ಫೋರೆನ್ಸಿಕ್ ಪ್ರಯೋಗಾಯಲಕ್ಕೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆ ಮುಂದುವರೆದಿದ್ದು, ಜಾಲದಲ್ಲಿ ಭಾಗಿಯಾದ ಇತರರನ್ನೂ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read  ನಟನೆ ಬಿಟ್ಟು 'ಮಾಂಸ' ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್

error: Content is protected !!
Scroll to Top