ಮಂಗಳೂರು: ಚಿಕನ್ ಸೆಂಟರ್‌ನಲ್ಲಿ ಅಕ್ರಮ ಬೀಫ್ ಮಾರಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 07. ಇಲ್ಲಿನ ಕೋಳಿ ಅಂಗಡಿಯೊಂದರಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ದಾಳಿ ನಡೆಸಿದ ಬಜ್ಪೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಸಫೀಕ್ ಎಂದು ಗುರುತಿಸಲಾಗಿದೆ. ಇವರು ಮೂಡುಪೆರಾರ ಗ್ರಾಮದ ಸೂರಲ್ಪಾಡಿಯ ಸಲ್ವಾ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದು, ಈ ಕುರಿತ ಖಚಿತ ಮಾಹಿತಿಯನ್ನಾಧರಿಸಿ ಬಜಪೆ ಪೊಲೀಸರು ಚಿಕನ್ ಸೆಂಟರ್ ಗೆ ಢಿಡೀರ್ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ದಾಳಿಯ ಸಂದರ್ಭದಲ್ಲಿ ಅಂಗಡಿಯಲ್ಲಿದ್ದ ಸುಮಾರು 23 ಕೆ.ಜಿ. ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ವಿಧಿವಶ

 

error: Content is protected !!
Scroll to Top