ಕಾಸರಗೋಡು: ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷನ ಕೊಲೆಗೆ ಯತ್ನ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಎ. 08. ಕಾಸರಗೋಡು ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಶ್ರೀಜಿತ್ ಎಂಬವರ ಮೇಲೆ ದುಷ್ಕರ್ಮಿಗಳ ತಂಡವೊಂದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.


ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡ ಶ್ರೀಜಿತ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹತ್ಯೆ ಯತ್ನದ ಹಿಂದೆ ಸಿಪಿಐಎಂ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ದೂರಿದೆ. ಮಂಗಳವಾರವಷ್ಟೇ ಕೇರಳದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದ ಬೆನ್ನಲ್ಲೇ ಕಣ್ಣೂರಿನಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತನ ಹತ್ಯೆ ನಡೆದಿತ್ತು. ಇದೀಗ ಕಾಸರಗೋಡಿನಲ್ಲಿ ಬಿಜೆಪಿ ಮುಖಂಡನ ಹತ್ಯಾಯತ್ನ ನಡೆದಿದೆ. ಈ ಕುರಿತು ಅಂಬಲತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಫೋನ್ ರಿಸೀವ್ ಮಾಡಿಲ್ಲ ಎಂದು ಮಹಿಳೆಯನ್ನೇ ಕೊಲೆಗೈದ ಕ್ಯಾಬ್ ಚಾಲಕ

error: Content is protected !!
Scroll to Top