ಉಪ್ಪಿನಂಗಡಿ: ಖಾಸಗಿ ಬಸ್ – ಇನ್ನೋವಾ ಕಾರು ನಡುವೆ ಢಿಕ್ಕಿ ➤ ಕಾರು ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.08. ತಮಿಳುನಾಡು ಮೂಲದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಗುರುವಾರದಂದು ನಡೆದಿದೆ.

ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ತಮಿಳುನಾಡು ನೋಂದಣಿಯ ಖಾಸಗಿ ಬಸ್ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಲಷ್ಕರ್-ಎ-ತೊಯ್ಬಾ ಉಗ್ರರ ಆರು ಮಂದಿ ಸಹಚರರ ಬಂಧನ

 

 

error: Content is protected !!
Scroll to Top