ಸುಳ್ಯ: ಶೌಚಾಲಯದೊಳಗೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಎ. 08. ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದ ಸ್ವಚ್ಛತೆಗೆಂದು ತೆರಳಿದ್ದ ವ್ಯಕ್ತಿಯೋರ್ವ ಕುಸಿದುಬಿದ್ದು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.


ಮೃತರನ್ನು ಐವರ್ನಾಡು ಗ್ರಾಮದ ಕೊಳ್ಳಂಪಾಡಿ ನಿವಾಸಿ ಸುಂದರ ಎಂದು ಗುರುತಿಸಲಾಗಿದೆ. ವಿಪರೀತ ಕುಡಿತದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Scroll to Top