ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೂಟೂರು ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 08. ಬಿಗ್ ಬಾಸ್ ಸೀಸನ್ 7ರ ಖ್ಯಾತಿಯ ಚೈತ್ರಾ ಕೂಟೂರು ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೋಲಾರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗುರುವಾರ ಬೆಳಗ್ಗೆ 5 ಗಂಟೆಗೆ ವಿಷ ಸೇವಿಸಿದ್ದು, ವಿಷಯ ತಿಳಿದ ಮನೆಯವರು ಚೈತ್ರಾ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚೈತ್ರಾ ಅವರು ಪ್ರಾಣಾಪಾಯದಿಂದ ಪಾರಾಗಿ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮದುವೆ ವಿಚಾರದಲ್ಲಿ ತೀವ್ರ ನೊಂದಿದ್ದ ಇವರು, ಮನೆಯಲ್ಲಿಯೇ ಫಿನಾಯಿಲ್ ಸೇವಿಸಿ ಸಾಯಲು ಯತ್ನಿಸಿದ್ದಾರೆ ಎಂದು ಅವರ ತಂದೆ ನಾರಾಯಣಪ್ಪ ತಿಳಿಸಿದ್ದಾರೆ.

Also Read  17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

 

error: Content is protected !!
Scroll to Top